Kannada NewsKarnataka NewsLatestPolitics

*ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದ ಮಾಜಿ ಶಾಸಕ; ಕುತೂಹಲ ಮೂಡಿಸಿದ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಿದೆ. ಈಗಾಗಲೇ ಮಾಜಿ ಸಚಿವ ವಿ.ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಲಾಭಿ ನಡೆಸಿದ್ದು, ಹೈಕಮಾಂಡ್ ಹಂತದಲ್ಲಿಯೂ ಒತ್ತಡ ಹೇರುತ್ತಿದ್ದಾರೆ. ಈ ಮಧ್ಯೆ ಮಾಜಿ ಶಾಸಕ ರಾಜುಗೌಡ ತಾನೂ ಕೂಡ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ.

ಮಾಜಿ ಶಾಸಕ ರಾಜುಗೌಡ ಹಾಗೂ ಬಿ.ಸಿ.ಪಾಟೀಲ್ ಇತ್ತೀಚೆಗೆ ನಟ ಕಿಚ್ಚ ಸುದೀಪ್ ಅವರ ಬರ್ತ್ ಡೇ ಪಾರ್ಟಿ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ‘ಆಪರೇಷನ್ ಹಸ್ತ’ಕ್ಕೆ ಮತ್ತಿಬ್ಬರು ಬಿಜೆಪಿ ನಾಯಕರು…ಎಂಬ ಚರ್ಚೆ ಶುರುವಾಗಿತ್ತು. ರಾಜುಗೌಡ ಕಾಂಗ್ರೆಸ್ ಸೇರ್ಪಡೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಹೇಳುವ ಮೂಲಕ ಕುತೂಲಹ ಮೂಡಿಸಿದ್ದಾರೆ.

Home add -Advt

ಯಾದಗಿರಿಯಲ್ಲಿ ಮಾತನಾಡಿದ ರಾಜುಗೌಡ, ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗಬೇಕು ಎಂಬ ಯೋಚನೆಯಲ್ಲಿದ್ದೇನೆ. ನಾನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ. ಹೀಗಿರುವಾಗ ನಾನು ಯಾವ ಮುಖ ಇಟ್ಟುಕೊಂಡು ಕಾಂಗ್ರೆಸ್ ಗೆ ಹೋಗಲಿ? ಎಂದು ಕೇಳಿದ್ದಾರೆ.

ಈ ಮೂಲಕ ತಾನು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

Related Articles

Back to top button