Latest

*ಸ್ಪರ್ಧೆ ವಿಚಾರ ನಾಳೆ ತಿಳಿಸುತ್ತೇನೆ ಎಂದ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ವಿಪಕ್ಷ ನಾಯಕನ ನಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋಲಾರದಿಂದ ಸ್ಪರ್ಧೆ ಬೇಡ ಎಂದು ಹೈಕಮಾಂಡ್ ನನಗೆ ಹೇಳಿಲ್ಲ. ನನ್ನ ಸ್ಪರ್ಧೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸುವಂತೆ ಒತ್ತಾಯಿಸಿ ಬೆಂಬಲಿಗರು ಬೆಂಗಳೂರಿನ ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಒಂದು ವೇಳೆ ಕೋಲಾರದಿಂದ ಸ್ಪರ್ಧೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಇದರ ಬೆನ್ನಲ್ಲೇ ಧರಣಿ ಸ್ಥಳಕ್ಕೆ ಆಗಮಿಸಿದ ಸಿದ್ದರಾಮಯ್ಯ ಬೆಂಬಲಿಗರ ಸಮಾಧಾನ ಪಡಿಸುವ ಯತ್ನ ನಡೆಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನನಗೆ ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂದು ರಾಹುಲ್ ಗಾಂಧಿಯಾಗಲಿ ಅಥವಾ ಯಾವುದೇ ಹೈಕಮಾಂಡ್ ನಾಯಕರಾಗಲಿ ಹೇಳಿಲ್ಲ. ರಾಜ್ಯಾದ್ಯಂತ ನೀವು ಪ್ರವಾಸ ಮಾಡಬೇಕು. ಕೋಲಾರದಲ್ಲಿ ಮಾತ್ರ ಪ್ರಚಾರ ಮಾಡುವಂತಿಲ್ಲ ಎಂದು ಸಲಹೆ ನೀಡಿದ್ದಾರೆ

1 ಪರ್ಸೆಂಟ್ ಕೂಡ ರಿಸ್ಕ್ ತೆಗೆದುಕೊಳ್ಳಬೇಡಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಹೊರತು ಕೋಲಾರದಿಂದ ಸ್ಪರ್ಧಿಸಬೇಡಿ, ವರುಣಾದಿಂದ ಸ್ಪರ್ಧಿಸಿ ಎಂದು ಏನೂ ಹೇಳಿಲ್ಲ. ನಾನು ಅರ್ಜಿ ಸಲ್ಲಿಸುವಾಗ ಸ್ಪರ್ಧ ಕ್ಷೇತ್ರದ ನಿರ್ಧಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಬರೆದಿದ್ದೇನೆ. ಹಾಗಾಗಿ ಹೈಕಮಾಂಡ್ ಸೂಚಿಸಿದ ಜಾಗದಿಂದ ಸ್ಪರ್ಧೆ ಮಾಡುತ್ತೇನೆ ಎಂದರು.

Home add -Advt

ನನ್ನ ಸ್ಪರ್ಧೆ ಕ್ಷೇತ್ರದ ಬಗ್ಗೆ ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ. ಕೋಲಾರದ ಬಗ್ಗೆ ನಾನು ನನ್ನ ಕುಟುಮ್ಬದ ಸದಸ್ಯರ ಜೊತೆ ಹಾಗೂ ರಮೇಶ್ ಕುಮಾರ್, ಕೆ.ಹೆಚ್.ಮುನಿಯಪ್ಪ ಹಾಗೂ ಇನ್ನೂ ಹಲವು ನಾಯಕರೊಂದಿಗೆ ಮತ್ತೊಮ್ಮೆ ಚರ್ಚೆ ನಡೆಸುತ್ತೇನೆ. ಸ್ಪರ್ಧೆ ವಿಚಾರದ ಬಗ್ಗೆ ನಾಳೆ ತಿಳಿಸುತ್ತೇನೆ ಎಂದರು.
Siddaramaiah,Reaction,Kolara Contest,Protest

Related Articles

Back to top button