Kannada NewsKarnataka NewsLatestPolitics

*ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೆ ಲೋಕಸಭಾ ಟಿಕೆಟ್ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಮಹಿಲಾ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡಿವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Home add -Advt

ದಾವಣಗೆರಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.

ಇದೇ ವೇಳೆ ಬಾಗೂರು ಚನ್ನಕೇಶವ ದೇವಸ್ಥಾನದೊಳಗೆ ಈಶ್ವರಾನಂದ ಸ್ವಾಮೀಜಿ ಅವರನ್ನು ಬಿಟ್ಟಿಲ್ಲ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿ ಗೊತ್ತಿಲ್ಲದ ವಿಚಾರದ ಬಗ್ಗೆ ಹೇಗೆ ಪ್ರತಿಕ್ರಿಯೆ ನೀಡುವುದು ಎಂದರು.


Related Articles

Back to top button