Karnataka NewsPolitics

*ನಾನು ತಪ್ಪು ಮಾಡಿಲ್ಲ; ರಾಜೀನಾಮೆ ಕೊಡಲ್ಲ: ಸಿಎಂ ಪುನರುಚ್ಛಾರ*

ಪ್ರಗತಿವಾಹಿನಿ ಸುದ್ದಿ: ವಿಪಕ್ಷಗಳಿಂದ ರಾಜೀನಾಮೆಗೆ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ತಪ್ಪು ಮಡಿಲ್ಲ, ರಾಜೀನಾಮೆ ಕೊಡಲ್ಲ ಎಂದು ಪುನರುಚ್ಛರಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ತಪ್ಪೇ ಮಾಡಿಲ್ಲ ಎಂದ ಮೇಲೆ ಯಾಕೆ ರಾಜೀನಾಮೆ ಕೊಡಬೇಕು? ಎಂದು ಪ್ರಶ್ನಿಸಿದರು.

Home add -Advt

ಕಾನೂನು ಪ್ರಕಾರವೇ ನಾವು ಹೋರಾಟ ಮಾಡುತ್ತೇವೆ. ಸಂವಿಧಾನ ವಿರುದ್ಧವಾಗಿ ನಾವು ಏನೂ ಮಾಡಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ ಎಂದರು.

ಎಲ್ಲಾ ಕಡೆಯೂ ಸಿಬಿಐ, ಇಡಿ, ರಾಜ್ಯಪಾಲರ ಕಚೇರಿ ದುರ್ಬಳಕೆಯಾಗುತ್ತಿದೆ. ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡುವುದಿಲ್ಲ. ಕುಮಾರಸ್ವಾಮಿ ಯಾಕೆ ಯಾರ ಸಂಪುಟದಲ್ಲಿ ಇದ್ದಾರೆ? ಅವರು ಯಾಕೆ ರಾಜೀನಾಮೆ ಕೊಡುತ್ತಿಲ್ಲ? ಅವರ ವಿರುದ್ಧವೂ ಆರೋಪಗಳಿವೆ ಅವರು ಯಾಕೆ ರಾಜೀನಾಮೆ ಕೊಟ್ಟಿಲ್ಲ? ರಾಜೀನಾಮೆ ಕೇಲಲು ಬಿಜೆಪಿಯವರಿಗೆ ಯವ ನೈತಿಕತೆ ಇದೆ? ಎಂದು ಕೇಳಿದರು.

Related Articles

Back to top button