20 ಕೀ.ಮೀ ಸಫಾರಿ ನಡೆಸಿದರೂ ಪ್ರಧಾನಿ ಮೋದಿ ಕಣ್ಣಿಗೆ ಕಾಣಿಸಿಕೊಳ್ಳದ ಹುಲಿರಾಯ; ಹಿಡಿದು ಮಾರಿಬಿಡ್ತಾರೆ ಎಂಬ ಭಯಕ್ಕೆ ಯಾವ ಗುಹೆಯಲ್ಲಿ ಅಡಗಿ ಕೂತಿದೆಯೋ.. ಅಯ್ಯೋ ಪಾಪ….; ಸಿದ್ದರಾಮಯ್ಯ ವ್ಯಂಗ್ಯ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು ಒಂದು ಗಂಟೆ ಕಾಲ ಸಫಾರಿ ನಡೆಸಿದರೂ ಹುಲಿರಾಯ ಕಾಣಿಸಿಕೊಳ್ಳದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಹುಲಿಯೋಜನೆ ಸುವರ್ಣಮಹೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬಂಡಿಪುರ ರಾಷ್ಟ್ರೀಯ ಉದ್ಯಾನದಲ್ಲಿ ಸುಮಾರು 20 ಕಿ.ಮೀ ಸಫಾರಿ ನಡೆಸಿದರು. ಸಫಾರಿ ವೇಳೆ ಹಲುವು ಪ್ರಾಣಿಗಳು, ವನ್ಯಜೀವಿಗಳನ್ನು ವೀಕ್ಷಿಸಿದ್ದಾರೆ. ಆದರೆ ಹುಲಿ ಮಾತ್ರ ಎಲ್ಲಿಯೂ ಕಾಣಸಿಗಲಿಲ್ಲ ಎಂದು ತಿಳಿದುಬಂದಿದೆ. ಒಇದೇ ವಿಚಾರವಾಗಿ ಟ್ವೀಟ್ ಮೂಲಕ ಟೀಕಿಸಿರುವ ಸಿದ್ದರಾಮಯ್ಯ, ಹಿಡಿದು ಮಾರಿಬಿಡುತ್ತಾರೆ ಅನ್ನುವ ಭಯಕ್ಕೆ ಯಾವ ಗುಹೆಯೊಳಗೆ ಅಡಗಿ ಕೂತಿದೆಯೋ.. ಅಯ್ಯೋ ಪಾಪ….!! ಎಂದು ಟಾಂಗ್ ನೀಡಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ #SaveBandipur ( ಬಂಡಿಪುರ ಉಳಿಸಿ ) ಎಂಬ ಅಭಿಯಾನವನ್ನು ಕನ್ನಡಿಗರು ಶುರು ಮಾಡುವಂತೆ ಆಗದಿರಲಿ.. ಅದೇ ಪ್ರಧಾನಿ ನರೇಂದ್ರ ಮೋದಿಯವರು ಕರುನಾಡಿಗೆ ಮಾಡುವ ದೊಡ್ಡ ಉಪಕಾರ ಎಂದು ಕುಟುಕಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ