Politics

*ಆರ್.ಅಶೋಕ್ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮ್ಯಯ ತಿರುಗೇಟು*

ತಲೆಬುಡ ಇಲ್ಲದ ಅರ್ಥವಿಲ್ಲದ ಪ್ರಶ್ನೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ

ಪ್ರಗತಿವಾಹಿನಿ ಸುದ್ದಿ: ವಿಪಕ್ಷ ನಾಯಕ ಆರ್.ಅಶೋಕ್ ಅವರ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಆರ್. ಅಶೋಕ್ ಅವರೇ, ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ,
ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್.ಐ.ಟಿ ಯನ್ನು ರಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಿಮಗೆ ಇಲ್ಲವೇ ನಿಮ್ಮ ಪಕ್ಷಕ್ಕೆ ಏನಾದರೂ ಹೇಳುವುದಿದ್ದರೆ ಇಲ್ಲವೇ ಕೇಳುವುದಿದ್ದರೆ ಎಸ್.ಐ.ಟಿ ಮುಂದೆ ಹೋಗಿ ಕೇಳಿ, ಇಲ್ಲವೇ ಹೇಳಿ.

Home add -Advt

ಇದನ್ನು ಬಿಟ್ಟು ಹಾದಿಬೀದಿಯಲ್ಲಿ ಮಾತನಾಡುವವರಂತೆ, ತಾವೇ ಕತೆ ಕಟ್ಟಿಕೊಂಡು ತಲೆಬುಡ ಇಲ್ಲದ ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ

ನಮಗೆ ಪ್ರಶ್ನೆ ಕೇಳುವ ಮೊದಲು ನಿಮ್ಮದೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾ‍ಳ್ ಅವರು ನಿರಂತರವಾಗಿ ಪಕ್ಷದ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ಧೈರ್ಯ ತೋರಿಸಿ.

ಭ್ರಷ್ಟಾಚಾರ, ವಿದ್ರೋಹ ಮತ್ತು ಸ್ವಜನಪಕ್ಷಪಾತವೂ ಸೇರಿದಂತೆ ಯತ್ನಾಳ್ ಅವರು ಮಾಡುತ್ತಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ. ಇಂತಹ ಆರೋಪಗಳನ್ನು ಮಾಡಿದ ನಂತರವೂ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮಕೈಗೊಳ್ಳದಿರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶ ಇರುವುದನ್ನು ಪಕ್ಷದ ಹೈಕಮಾಂಡ್ ಕೂಡಾ ಒಪ್ಪಿಕೊಂಡಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

Related Articles

Back to top button