Latest

ಮಾನ ಮರ್ಯಾದೆ ಇದ್ದರೆ ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದರಾಮಯ್ಯ, ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಎಂಬುದು ಇದ್ದರೆ ತಕ್ಷಣ ಸಚಿವರ ರಾಜೀನಾಮೆ ಪಡೆದುಕೊಳ್ಳಲಿ ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಚಿವ ರಮೇಶ್ ಜಾರಕಿಹೊಳಿ ಅವರ ಕಾಮಕಾಂದ ಸಿಡಿ ಮೂಲಕ ಬಯಲಾಗಿದೆ. ಈ ಬಗ್ಗೆ ಸಂಪೂರ್ನ ತನಿಖೆಯಾಗಬೇಕು. ತಕ್ಷಣ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸಿ ಕ್ರಮಕೈಗೊಳ್ಳಬೇಕು. ಸರ್ಕಾರಕ್ಕೆ ಮೌಲ್ಯಗಳಿದ್ದರೆ ಮೊದಲು ಸಿಎಂ ಯಡಿಯೂರಪ್ಪನವರು ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆಯಲಿ ಎಂದು ಹೇಳಿದ್ದಾರೆ.

Home add -Advt

ಒಟ್ಟಾರೆ ಬಜೆಟ್ ಅಧಿವೇಶನ ಆರಂಭವಾಗುವ ಹೊತ್ತಲೇ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಸ್ಫೋಟಗೊಂಡಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳಿಗೆ ಅಸ್ತ್ರವಾಗಿ ಸಿಕ್ಕಿದಂತಾಗಿದೆ.

ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬೆನ್ನಲ್ಲೇ ಮತ್ತೊಂದು ಬಾಂಬ್ ಸಿಡಿಸಿದ ದಿನೇಶ್ ಕಲ್ಲಹಳ್ಳಿ

Related Articles

Back to top button