Latest

ಮುಂಬೈ ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾದ ಸಂಸದ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮುಂಬೈನ ಪಂಚತಾರಾ ಹೋಟೆಲ್ ಒಂದರಲ್ಲಿ ಸಂಸದ ಮೋಹನ್ ದೇಲ್ಕರ್ ಶವವಾಗಿ ಪತ್ತೆಯಾಗಿದ್ದಾರೆ. 58 ವರ್ಷದ ಮೋಹನ್ ದೇಲ್ಕರ್ ದಾದ್ರಾ ಮತ್ತು ನಗರ್ ಹವೇಲಿ ಸಂಸದರಾಗಿದ್ದರು.

ದಕ್ಷಿಣ ಮುಂಬೈನ ಮರೀನ್ ಡ್ರೈವ್ ನಲ್ಲಿರುವ ಸೀ ಗ್ರೀನ್ ಹೊಟೆಲ್ ನಲ್ಲಿ ದೇಲ್ಕರ್ ಅವರ ಮೃತದೇಹ ಪತ್ತೆಯಾಗಿದೆ. ಗುಜರಾತ್ ಭಾಷೆಯಲ್ಲಿ ಬರೆದಿರುವ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಸಂಸದರ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ದೇಲ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. 2019ರ ಲೋಕಸಭಾ ಚುನಾವಣೆಗೂ ಮುನ್ನ ದೇಲ್ಕರ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. ದಾದ್ರಾ ಹಾಗೂ ನಗರ್ ಹವೇಲಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.

Home add -Advt

Related Articles

Back to top button