Kannada NewsKarnataka NewsLatest

*ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ವಿಚಾರ; ಕುತೂಹಲ ಮೂಡಿಸಿದ ಸಿಎಂ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಇನ್ನೆರಡು ದಿನಗಳಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿಯೂ ಮಹತ್ವದ ಹೇಳಿಕೆ ನೀಡಿದರು.

ರಾಜಕೀಯ ನಿಂತ ನೀರಲ್ಲ. ಹೆಬ್ಬಾರ್ ಪಕ್ಷ ಸೇರ್ಪಡೆ ಬಗ್ಗೆ ನನ್ನ ಜೊತೆ ಮಾತನಾಡಿಲ್ಲ. ಅವರು ಪಕ್ಷಕ್ಕೆ ಸೇರುವ ಬಗ್ಗೆ ಮಾತನಾಡಿದರೆ ಮೊದಲು ಸ್ಥಳೀಯರ ಅಭಿಪ್ರಾಯ ಕೇಳುತ್ತೇವೆ ಎಂದರು.

ಬನವಾಸಿಯಲ್ಲಿ ಐತಿಹಾಸಿಕ ಕದಂಬೋತ್ಸವಕ್ಕೆ ಚಾಲನೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಗೂ ಗ್ಯಾರಂಟಿ ಕೊಟ್ಟಿದ್ದೇನೆ ಎಂದು ಹೇಳಿದ್ದರು. ಸಿಎಂ ಹೇಳಿಕೆ ತೀವ್ರ ಕುತೂಹಲ ಮೂಡಿಸಿತ್ತು.


Related Articles

Back to top button