Karnataka NewsLatestPolitics

*ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ತಾರಕಕ್ಕೇರಿದ್ದ ಕುರ್ಚಿಗಾಗಿ ಕಿತ್ತಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಬಗ್ಗೆ ರಾಜ್ಯಪಾಲರಿಗೆ ಸಿದ್ದರಾಮಯ್ಯ ಪತ್ರ ಸಲ್ಲಿಸಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.

Home add -Advt

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ನಿನ್ನೆ ಬೆಳಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ರಾಜೀನಾಮೆ ಬಗ್ಗೆ ತಮ್ಮ ನಿರ್ಧಾರ ಪ್ರಕಟಿಸಿದ್ದರು. ಬಳಿಕ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹ್ಲೋಟ್ ಅವರು ತಮ್ಮ ವಿಶೇಷ ವಿವೇಚನಾಧಿಕಾರವನ್ನು ಬಳಸಿ ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.


Related Articles

Back to top button