*ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ತಾರಕಕ್ಕೇರಿದ್ದ ಕುರ್ಚಿಗಾಗಿ ಕಿತ್ತಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಬಗ್ಗೆ ರಾಜ್ಯಪಾಲರಿಗೆ ಸಿದ್ದರಾಮಯ್ಯ ಪತ್ರ ಸಲ್ಲಿಸಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ನಿನ್ನೆ ಬೆಳಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ … Continue reading *ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು*