Karnataka NewsLatestPolitics

*BREAKING: ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಹೈಕಮಾಂಡ್ ನಾಯಕರು ನಡೆಸಿದ ಮ್ಯಾರಥಾನ್ ಸಭೆಯಲ್ಲಿ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರನ್ನು ಒಪ್ಪಿಸಲಾಗಿದೆ ಎನ್ನಲಾಗಿದೆ.

Home add -Advt

ಈ ಹಿನ್ನೆಲೆಯಲ್ಲಿ ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಸಿದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ.

ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಚಿವರು, ಶಾಸಕರಿಗೆ ಉಪಹಾರ ಕೂಟ ಆಯೋಜಿಸಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ಬೆಳಿಗ್ಗೆ 10:30ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದಿಬಂದಿದೆ.

Related Articles

Back to top button