ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್.ಎಸ್.ಎಸ್ ನವರು ಮೂಲ ಭಾರತೀಯರಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಬಿಜೆಪಿ ಕಾಂಗ್ರೆಸ್ ನಾಯಕರ ಮೂಲದ ಬಗ್ಗೆ ವಿವರಿಸಿ ಟೀಕಾಪ್ರಹಾರ ನಡೆಸಿದೆ.
ಯಾರ ವಿಶ್ವಾಸಕ್ಕಾಗಿ ಸಿದ್ದರಾಮಯ್ಯನವರೇ ನೀವು ಹೇಳಿಕೆ ನೀಡುತ್ತಿದ್ದೀರೋ, ಅವರ ಮೂಲ ನಿಮಗೆ ತಿಳಿದಿಲ್ಲವೇ? ಫಿರೋಜ್ ಗಾಂಧಿ – ಫಿರೋಜ್ ಜೆಹಾಂಗೀರ್ ಗ್ಯಾಂಡಿ, ಪರ್ಷಿಯನ್ ಮೂಲ. ಸೋನಿಯಾ ಗಾಂಧಿ – ಎಡ್ವಿಜ್ ಆಂಟೋನಿಯಾ ಅಲ್ಬಿನಾ ಮೈನೊ, ಇಟಲಿ ಮೂಲ. ರಾಹುಲ್ ಗಾಂಧಿ – ರೌಲ್ ವಿನ್ಸಿ. ಇಂದಿರಾ ಕಾಂಗ್ರೆಸ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಆಗಿದ್ದೇಗೆ? ಇಂದಿರಾ ಪ್ರಿಯದರ್ಶಿನಿ ಗ್ಯಾಂಡಿ, ಇಂದಿರಾ ಗಾಂಧಿ ಆಗಿದ್ದೇಗೆ? ಎಂದು ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದೆ.
ಅಲ್ಲದೇ ಬಾಬರ್ ಸಮಾದಿಗೆ ಯಾರು ಯಾವ ಯಾವಾಗ ಭೇಟಿ ಕೊಟ್ಟರು ಎಂಬುದನ್ನು ತಿಳಿಸಿರುವ ಬಿಜೆಪಿ, ಆಫ್ಘಾನಿಸ್ತಾನದ ಬಾಬುರ್ ಸಮಾಧಿಗೆ, 1959 ರಲ್ಲಿ ನೆಹರೂ, 1968 ರಲ್ಲಿ ಇಂದಿರಾ ಗಾಂಧಿ, 2005 ರಲ್ಲಿ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ! ಭೇಟಿಯ ಬಳಿಕ “ಮೈ ಟ್ರೂ ಹೋಮ್ ಕಮಿಂಗ್” ಎಂದು ಉದ್ಘರಿಸಿದ್ದರು ಇಂದಿರಾ!!! ಸಾವಿರಾರು ಹಿಂದೂಗಳನ್ನು ಹತ್ಯೆಗೈದ ಬಾಬುರ್ ಎಂಬ ಮತಾಂಧನ ಮೂಲ ಹಾಗೂ ಇವರ ಮೂಲ ಎರಡೂ ಒಂದೇ ಆಗಿದೆಯೇ? ಎಂದು ಕೇಳಿದೆ.
ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಈಗಿರುವ ಕಾಂಗ್ರೆಸ್ ಪಕ್ಷ, ಇಂದಿರಾ ಕಾಂಗ್ರೆಸ್ ಪಕ್ಷ ಮತ್ತು ನಕಲಿ ಗಾಂಧಿಗಳ ಪಕ್ಷವಾಗಿದೆ ವಿಪಕ್ಷ ನಾಯಕ ಸಿದ್ದಾರಾಮಯ್ಯನವರೇ ನೀವು ಕೂಡ ಜನತಾದಳ ಪಕ್ಷದಿಂದ, ಅಧಿಕಾರದ ಮೋಹದಿಂದ ನಕಲಿ ಗಾಂಧಿ ಪಕ್ಷಕ್ಕೆ ಬಂದವರಲ್ಲವೇ? ಎಂದು ಹೇಳುವ ಮೂಲಕ ಬುರುಡೆರಾಮಯ್ಯ ಎಂದು ಕಿಡಿಕಾರಿದೆ.
ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ವಿರುದ್ಧ FIR ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ