
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ದಿಢೀರ್ ರದ್ದಾಗಿದೆ ಎಂದು ತಿಳಿದುಬಂದಿದೆ.
ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲಾ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ಕೊನೇ ಕ್ಷಣದಲ್ಲಿ ರದ್ದಾಗಿದೆ.
ಶ್ರೀನಗರದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಸಿದ್ದರಾಮಯ್ಯನವರು ಪಾಲ್ಗೊಳ್ಳಬೇಕಿತ್ತು. ಇಂದು ಬೆಳಿಗ್ಗೆ ಬೆಳಿಗ್ಗೆ 9:15ಕ್ಕೆ ಸಿದ್ದರಾಮಯ್ಯ ದೆಹಲಿಯಿಂದ ಶ್ರೀನಗರಕ್ಕೆ ವಿಮಾನದಲ್ಲಿ ತೆರಳಬೇಕಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಅಶೋಕ್ ಪಟ್ಟಣ, ಐವಾನ್ ಡಿಸೋಜಾ ದೆಹಲಿ ಏರ್ ಪೋರ್ಟ್ ಗೆ ಬೆಳಿಗ್ಗೆ 8 ಗಂಟೆಗೆ ಆಗಮಿಸಿದ್ದರು. ಆದರೆ ದೆಹಲಿ-ಶ್ರೀನಗರ ನಡುವೆ ವಿಮಾನ ಹಾರಾಟಗಳು ರದ್ದಾಗಿವೆ ಎಂದು ತಿಳಿದುಬಂದಿದೆ.
ಶ್ರೀನಗರದಲ್ಲಿ ಹವಾಮಾನ ವೈಫರೀತ್ಯ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಶ್ರೀನಗರ ನಡುವಿನ ಎಲ್ಲಾ ವಿಮಾನ ಹಾರಾಟ ರದ್ದುಪಡಿಸಲಾಗಿದೆ. ಈ ಕಾರಣದಿಂದ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ ಎಂದು ತಿಳಿದುಬಂದಿದೆ.
*ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ; ತೀವ್ರ ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ*
https://pragati.taskdun.com/ramesh-jarakiholid-k-shivakumaraudiobelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ