Kannada NewsKarnataka NewsLatestPolitics

*ಸಿಂಧನೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಸಿಂಧನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಂಧನೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ತಿಮ್ಮಾಪೂರ ಏತ ನೀರಾವರಿ ಯೋಜನೆ, ಜಲ ಜೀವನ್ ಮಿಷನ್ (DBOT) ಯೋಜನೆಯ ಶಂಕುಸ್ಥಾಪನೆ ಸೇರಿದಂತೆ ಸಿಂಧನೂರು ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಜಿಲ್ಲೆಯ ಶಾಸಕರುಗಳಾದ ಹಂಪಯ್ಯ ನಾಯಕ್, ಮಾನಪ್ಪ ಡಿ.ವಜ್ಜಲ್, ಬಸವನಗೌಡ ದದ್ದಲ್, ಡಾ.ಎಸ್.ಶಿವರಾಜ್ ಪಾಟೀಲ್, ಆರ್. ಬಸವನಗೌಡ ತುರ್ವಿಹಾಳ, ಶರಣಗೌಡ ಪಾಟೀಲ್ ಬಯ್ಯಾಪುರ ಸೇರಿ ಹಲವು ಮುಖಂಡರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾದ ಅಭಿವೃದ್ಧಿ ಕಾರ್ಯಗಳ ಪಟ್ಟಿ:

Home add -Advt

ತಿಮ್ಮಾಪೂರ ಏತ ನೀರಾವರಿ ಯೋಜನೆ

ಜಲ ಜೀವನ್ ಮಿಷನ್

ಸರಕಾರಿ ಪದವಿ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ

ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ಕನ್ನಡ ರಥದ ಮೆರವಣಿಗೆಗೆ ಚಾಲನೆ

ಹದಿಹರೆಯದ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ವಿತರಣೆ

ಸಿಂಧನೂರು ನಗರ ಸಂಚಾರ ಪೊಲೀಸ್ ಠಾಣೆ ಕಟ್ಟಡದ ಉದ್ಘಾಟನೆ


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button