ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರಿನ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರಂಭವಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಅರ್ಜಿ ವಿಚಾರಣೆ ಆರಂಭವಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಪರ ಲಕ್ಷ್ಮೀ ಅಯ್ಯಂಗಾರ್ ವಾದ ಮಂಡನೆ ನಡೆಸಿದ್ದಾರೆ.
ಮುಡಾ ಹಗರಣ ವಿಚಾರವಾಗಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಎತ್ತಿ ಹಿಡಿದಿರುವ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ತೀರ್ಪಿನ ಪ್ರತಿಯನ್ನು ಕೂಡ ವಕೀಲೆ ಲಕ್ಷ್ಮೀ ಅಯ್ಯಂಗಾರ್ ಜನಪ್ರತಿನಿಧಿಗಳ ಕೋರ್ಟ್ ಗೆ ಸಲ್ಲಿಕೆ ಮಾಡಿದ್ದಾರೆ. ವಾದ-ಪ್ರತಿ ವಾದ ಆಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಯಾವ ಆದೇಶ ಹೊರಡಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ