ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದ್ದಾರೆ.
ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸಿದ್ದರಾಮಯ್ಯ ವಿರುದ್ಧ ಸಿಆರ್ ಪಿಸಿ ಕಾಯ್ದೆಯಡಿ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. 6 ವಾರಗಳಲ್ಲಿ ತನಿಖೆ ನಡೆಸಿ, ಡಿಸೆಂಬರ್ 24ರ ಒಳಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟಿನಲ್ಲಿ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಶುರಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ