ಪ್ರಗತಿವಾಹಿನಿ ಸುದ್ದಿ: ತಮಗೆ 10 ಸಾವಿರ ದಂಡ ವಿಧಿಸಿ, ಎಫ್ ಐ ಆರ್ ದಾಖಲಿಸಿದ ಪ್ರಕರಣದ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ತಡೆ ನೀಡಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿತ್ತು.
ತಮ್ಮ ವಿರುದ್ಧದ ಎಫ್ ಐ ಆರ್ ಪ್ರಶ್ನಿಸಿ ಹಾಗೂ ಹೈಕೋರ್ಟ್ ವಿಧಿಸಿದ್ದ 10 ಸಾವಿರ ರೂಪಾಯಿ ದಂಡ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಕಾಂಗ್ರೆಸ್ ನಾಯಕರ ಪರ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದ್ದಾರೆ. ಶಾಂತಿಯುತ ಪ್ರತಿಭಟನೆ ಮಾಡಿದ್ದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಸಂವಿಧಾನ 19(1)(ಎ) ಅಡಿ ಪ್ರತಿಭಟಿಸುವ ಹಕ್ಕಿನ ಉಲ್ಲಂಘನೆ. ಯಾವುದೇ ಕ್ರಿಮಿನಲ್ ಉದ್ದೇಶಿಲ್ಲದ ಶಾಂತಿಯುತವಾಗಿ ನಡೆದಿದ್ದ ರಾಜಕೀಯ ಪ್ರತಿಭಟನೆಯನ್ನು ದಂಡ ನಿಬಂಧನೆಗೆ ಒಳಪಡಿಸಿ ನಿಯಂತ್ರಿಸುವುದು ಸರಿಯಲ್ಲ ಎಂದು ವಾದ ಮಂಡಿಸಿದ್ದರು,
ವಾದ ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್, ಮುಂದಿನ ಆದೇಶದವರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ