Latest

ಪ್ರಾಮಾಣಿಕ ಪ್ರಯತ್ನ ಮಾಡಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಿ; ಸಿದ್ದರಾಮಯ್ಯ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಲಸಿಕೆ ಅಭಾವ ಹಾಗೂ ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ಕಾರ್ಯ ವೈಖರಿ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ ಎಂದಿರುವ ಸಿದ್ದರಾಮಯ್ಯ, ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಲಸಿಕೆ ತಯಾರಿಕೆ ಸಂಬಂಧ 162 ಯುನಿಟ್ ಗಳಿಗೆ ಕೇಂದ್ರ ಸರ್ಕಾರ ಟೆಂಡರ್ ಕರೆದಿತ್ತು, ಈ ಪೈಕಿ 30 ಯುನಿಟ್ ಗಳಷ್ಟೇ ಕಾರ್ಯಾರಂಭ ಮಾಡಿವೆ. ದೇಶದಲ್ಲಿ ಲಸಿಕೆಯ ಅಭಾವ ಉಂಟಾಗಲು ಇದೇ ಮುಖ್ಯ ಕಾರಣ. ಒಟ್ಟಿನಲ್ಲಿ ಕೇಂದ್ರದ ನಾಯಕರ ತಾತ್ಸಾರ ಧೋರಣೆಗೆ ಜನ ಜೀವ ತೆರುವಂತಾಗಿದೆ ಎಂದು ಸರಣಿ ಟ್ವೀಟ್ ಮೂಲಕ ಗುಡುಗಿದ್ದಾರೆ.

ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೊನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ.

45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಗಷ್ಟೇ ಕೇಂದ್ರ ಸರ್ಕಾರ ಹಣ ಕೊಡುವುದು, ಅದಕ್ಕಿಂತ ಕೆಳಗಿನ ವಯೋಮಾನದ ಜನರಿಗೆ ನೀಡುವ ಲಸಿಕೆಗೆ ರಾಜ್ಯಗಳೇ ಹಣ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ, ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button