Kannada NewsLatest

ಮಹಾರಾಷ್ಟ್ರ ಸಿಎಂ ಅಧಿಕ ಪ್ರಸಂಗತನ ಎಂದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಡಿ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕ್ಯಾತೆಗೆ ಖಡಕ್ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡುವುದು ಸರಿಯಲ್ಲ. ಬೆಳಗಾವಿ ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನಾ-ಕಾಂಗ್ರೆಸ್ ನೇತೃತ್ವದ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರವಿದ್ದರೂ ಉದ್ಧವ್ ಠಾಕ್ರೆ ಹೇಳಿಕೆಗೆ ಕಿಡಿಕಾರಿರುವ ಸಿದ್ದರಾಮಯ್ಯ, ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ ಎಂದು ಖಡಕ್ ಆಗಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಬೆಳಗಾವಿ ನಮ್ಮದು ಎಂದಿದ್ದಾರೆ.

Related Articles

Back to top button