*ಜಿಲ್ಲಾ ಪ್ರವಾಸ ದಿಢೀರ್ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ ರದ್ದುಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಜೂನ್ 20ರಂದು ಸಿಎಂ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲೆಗೆ ತೆರಳ ಬೇಕಾಗಿತ್ತು. ಈ ನಿಟ್ಟಿನಲ್ಲಿ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. … Continue reading *ಜಿಲ್ಲಾ ಪ್ರವಾಸ ದಿಢೀರ್ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ*