
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಗಳು ಫೆಬ್ರವರಿ 22ರಂದು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಪ್ರಕಾರ, ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ಕಡೆಗೆ ಪ್ರಯಾಣಿಸಲಿದ್ದು, 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಅಂಕೋಲಾ ತಾಲೂಕಿನ ಪಂಜಿನಗೆ ಗ್ರಾಮದಲ್ಲಿನ ಕೃಷ್ಣ ಗ್ರೌಂಡ್ ಹೆಲಿಪ್ಯಾಡ್‌ಗೆ 11.50ಕ್ಕೆ ಆಗಮಿಸಲಿದ್ದಾರೆ.
ಅಲ್ಲಿ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ, ಕಾರವಾರ ವಿಭಾಗದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಅಂಕೋಲಾದಿಂದ ಹೆಲಿಕಾಪ್ಟರ್ ಮೂಲಕ ಹೊರಟು 12.45ಕ್ಕೆ ಕಾರವಾರದ ಶ್ರೀ ಮಾಲಾದೇವಿ ಹೆಲಿಪ್ಯಾಡ್ ತಲುಪಲಿದ್ದಾರೆ. ಅಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 450 ಮನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 4 ಗಂಟೆಗೆ ಕಾರವಾರದಿಂದ ಹೆಲಿಕಾಪ್ಟರ್ ಮೂಲಕ ಹೊರಟು 4.45ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, 4.50ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಸಂಜೆ 5.50ಕ್ಕೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.




