Latest

*ಸಿದ್ದರಾಮಯ್ಯ ಸ್ಪರ್ಧೆ ಕ್ಷೇತ್ರ ಬಹುತೇಕ ಖಚಿತ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಬಹೂತೇಕ ಖಚಿತವಾಗಿದೆ. ಈ ಬಗ್ಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಪರೋಕ್ಷ ಸುಳಿವು ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದರಾಮಯ್ಯ, ನಮ್ಮ ತಂದೆ ಇನ್ನು 2-3 ದಿನಗಳಲ್ಲಿ ತಾವು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ತಿಳಿಸಲಿದ್ದಾರೆ. ನಾನು ಈ ಹಿಂದೆಯೇ ವರುಣಾದಿಂದ ಸ್ಪರ್ಧಿಸಿ ಎಂದು ಹೇಳಿದ್ದೆ. ಹೈಕಮಾಂಡ್ ನಾಯಕರೂ ಕೂಡ ಸಿದ್ದರಾಮಯ್ಯನವರಿಗೆ ವರುಣಾದಿಂದ ಸ್ಪರ್ಧಿಸಲು ಹೇಳಿದ್ದರು ಎಂದು ತಿಳಿಸಿದ್ದಾರೆ.

Related Articles

ಈಗಾಗಲೇ ವರುಣಾದಲ್ಲಿ ಕಾಂಗ್ರೆಸ್ ಮಾಡಿರುವ ಆಂತರಿಕ ಸಮೀಕ್ಷೆ ಹಾಗೂ ನಾನು ನಡೆಸಿರುವ ಆಂತರಿಕ ಸಮೀಕ್ಷೆ ಫಲಿತಾಂಶಗಳು ಸಿದ್ದರಾಮಯ್ಯ ಪರವಾಗಿ ಬಂದಿವೆ. ಎರಡು ಮೂರು ದಿನಗಳಲ್ಲಿ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದರು.

ಹೈಕಮಾಂಡ್ ಯಾವ ಕಾರಣಕ್ಕೆ ಕೋಲಾರ ಬಿಟ್ಟು ವರುಣಾದಿಂದ ಸ್ಪರ್ಧಿಸುವಂತೆ ತಿಳಿಸಿದೆ ಎಂಬುದು ಗೊತ್ತಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

Home add -Advt

ಮಾಜಿ ಸಿಎಂ ಸಿದ್ದರಾಮಯ್ಯ ಈಬಾರಿ ಬಾದಾಮಿ ಕ್ಷೇತ್ರ ಬಿಟ್ಟು ಕೋಲಾರದಿಂದ ಸ್ಪರ್ಧಿಸಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿದ್ದರಾಮಯ್ಯನವರಿಗೆ ಕೋಲಾರದಿಮ್ದ ಹಿಂದೆ ಸರಿಯುವಂತೆ ಹೇಳಿದ್ದು, ವರುಣಾದಿಂದ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತೆ ಗೊಂದಲದಲ್ಲಿ ಸಿಲುಕಿದ್ದರು. ಹೈಕಮಾಂಡ್ ಸೂಚನೆ ಮೇರೆಗೆ ಇದೀಗ ಸಿದ್ದರಾಮಯ್ಯ ವರುಣಾದಿಂದಲೇ ಸ್ಪರ್ಧೆ ಮಾಡುವ ಸಾಧ್ಯತೆ ದಟ್ಟವಾಗಿದೆ.

Related Articles

Back to top button