*ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ: ದಂಗಾದ ಸಿಬ್ಬಂದಿಗಳು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಆಸ್ಪತ್ರೆಗೆ ಏಕಾಏಕಿ ಭೇಟಿ ನೀಡಿದ್ದನ್ನು ಕಂಡು ವೈದ್ಯಕೀಯ ಸಿಬ್ಬಂದಿಗಳು ದಂಗಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜೊತೆ ಸಿಎಂ ಸಿ಼ದ್ದರಾಮಯ್ಯ ಯಾವುದೇ ಮಾಹಿತಿ ನೀಡದೇ ದಿಢೀರ್ ಆಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಲ್ಲಿನ ಸಮಸ್ಯೆ, ವೈದ್ಯಕೀಯ ಸೌಲಭ್ಯ, ಚಿಕಿತ್ಸಾ ವ್ಯವಸ್ಥೆ ಬಗ್ಗೆ ಖುದ್ದು ರೋಗಿಗಳೊಂದಿಗೆ ಚರ್ಚಿಸಿ ಸಿಎಂ ಹಾಗೂ ಸಚಿವರು ಮಾಹಿತಿ ಪಡೆದರು. … Continue reading *ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ: ದಂಗಾದ ಸಿಬ್ಬಂದಿಗಳು*