
ಪ್ರಗತಿವಾಹಿನಿ ಸುದ್ದಿ: ಬೈಕ್ ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಇಂಚರ (20) ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿನಿ.
ಹೊಂಪಲಘಟ್ಟ ಗ್ರಾಮದ ನಿವಾಸಿ ಇಂಚರ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಇಂಚರ ಕಾಲೇಜು ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಹೊಸೂರು ರಸ್ತೆಯ ಸವೆರಾ ಟೀ ಸ್ಟಾಲ್ ಬಳಿ ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದೆ. ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




