Politics

*ಗುರುವಾರ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೀ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಬಂದಿದ್ದು, ಅರ್ಜಿ ವಜಾಗೊಳಿಸಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ನಾಳೆ ಜನಪ್ರತಿನಿಧಿಗಳ ಕೋರ್ಟ್ ನಲ್ಲಿಯೂ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಗುರುವಾರ ಬೆಳಿಗ್ಗೆ 11 ಗಂಟೆಗೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಗುರುವಾರ ಬೆಳಿಗ್ಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ.

ರಾಜ್ಯಪಾಲರು ಬೇರೆ ಬೇರೆ ಪ್ರಕರನಗಳ ಬಗ್ಗೆಯೂ ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದು ವಿವರಣೆ ಕೇಳಿದ್ದಾರೆ. ಅಲ್ಲದೇ ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ ವಿರುದ್ಧವೂ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ. ಈ ಎಲ್ಲಾ ವಿಚಾರಗಳ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button