ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಎರಡುವರೆ ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ. ಅಧಿಕರ ಹಂಚಿಕೆಯಾಗಲಿದೆ ಎಂಬ ವಿಚಾರ ಈಗಿನಿಂದಲೇ ಭಾರಿ ಚರ್ಚೆಗೆ ಕಾರಣವಾಗಿತ್ತು. ಹೈಕಮಾಂಡ್ ನಾಯಕರು ರಾಜ್ಯಕ್ಕೆ ಭೆಟಿ ನೀಡಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಈ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಅಧಿಕಾರ ಹಂಚಿಕೆ ವಿಚಾರವಾಗಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನೇ ಮುಖ್ಯಮಂತ್ರಿಯಾಗಿ ಇದ್ದೇನೆ, ನಾನೇ ಮುಂದುವರೆಯುತ್ತೇನೆ ಎಂದು ಹೇಳುವ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಬಿಜೆಪಿಯವರಿಗೆ ಅಧಿಕರವಿಲ್ಲದೇ ಇರಲಾಗುತ್ತಿಲ್ಲ ಹಾಗಾಗಿ ಅನಗತ್ಯವಾಗಿ ಮಾತುಗಳನ್ನು ಆಡುತ್ತಿದ್ದಾರೆ. ನಮ್ಮ ಸರ್ಕಾರ 5 ವರ್ಷ ಸುಭದ್ರವಾಗಿ ಇರಲಿದೆ. ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಹೇಳಿದರು.
ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯುತ್ತದೆ. ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ಮಾಡುತ್ತೇವೆ. ಮತ್ತೆ ಚುನಾವಣೆಗೆ ಹೋಗುತ್ತೇವೆ. ಮತ್ತೆ ಜನ ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ