Cancer Hospital 2
Laxmi Tai Society2
Beereshwara add32

*ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು: ಸಿಎಂ ಸಿದ್ದರಾಮಯ್ಯ ಕರೆ*

Anvekar 3

ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇತಿಹಾಸ ಎಲ್ಲರಿಗೂ ತಿಳಿಯಬೇಕು. ಇತಿಹಾಸ ತಿಳಿಯದವರು ಇತಿಹಾಸ ರಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ವಾಗಬೇಕು ಎಂದರು.

ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕು. ಅಮರಾಶಿಲ್ಪಿ ಜಕಣಾಚಾರಿ ಸಂಸ್ಮರಣೆ 2019 ರಲ್ಲಿ ಪ್ರಾರಂಭವಾದರೂ ಕೋವಿಡ್ ಇದ್ದುದರಿಂದ ಆಚರಿಸಲಾಗಲಿಲ್ಲ. ಕಳೆದ ವರ್ಷ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗಿತ್ತು ಎಂದರು.

ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕೆಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಲಾಗುತ್ತದೆ ಎಂದರು.

Emergency Service

ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು
ಜಕಣಾಚಾರಿ ಇಡೀ ರಾಜ್ಯಕ್ಕೆ ಗೊತ್ತಿರುವವರು. ಅವರ ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು. ಜಕಣಾಚಾರಿ ವಿಶ್ವಕರ್ಮ ಸಮಾಜದಲ್ಲಿ ಹುಟ್ಟಿದವರು. ಅವರು ಬೆಳೆದ ಎತ್ತರ ಜನರಿಗೆ ತಿಳಿಯಬಾರದೆಂದು ಇತಿಹಾಸ ತಿರುಚುವ ಪ್ರಯತ್ನ ಮಾಡಲಾಗಿದೆ.
ಪಟ್ಟಭದ್ರ ಹಿತಾಸಕ್ತಿಗಳು ಈ ಕೆಲಸ ಮಾಡಿದ್ದರೂ ಮಾಡಿರಬಹುದು. ಅಮರ ಶಿಲ್ಪಿ ಜಕಣಾಚಾರಿ ಇತಿಹಾಸ ನಮ್ಮ ಮುಂದಿದೆ ಎಂದರು.

ವಿಶ್ವಕರ್ಮ ಅಭಿವೃದ್ಧಿ ನಿಗಮ, ವಿಶ್ವಕರ್ಮ ಜಯಂತಿಯನ್ನು ಆಚರಿಸುವ ತೀರ್ಮಾನ ನಮ್ಮ ಸರ್ಕಾರವೇ ಹಿಂದೆ ಮಾಡಿತ್ತು ಎಂದು ಸ್ಮರಿಸಿದರು.

ಜಾತ್ಯಾತೀತ ಸಮಸಮಾಜ ನಿರ್ಮಾಣ
ನಮ್ಮ ಸಂವಿಧಾನ ಜಾತಿ ರಹಿತ, ವರ್ಗರಹಿತ, ಜಾತ್ಯಾತೀತ ಸಮಸಮಾಜ ನಿರ್ಮಾಣ ಮಾಡಬೇಕೆಂದು ಹೇಳಿದೆ. ಸ್ವಾರ್ಥಕ್ಕಾಗಿ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಶತಶತಮಾನಗಳಿಂದ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಅಸಮಾನತೆಗೆ ಬಲಿಯಾಗಿರುವ ವರ್ಗದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರು ಮುಖ್ಯವಾಹಿನಿಗೆ ಸೇರುವಂತಾಗಬೇಕು. ಎಲ್ಲರಿಗೂ ಅವಕಾಶ ಒದಗಿಸುವುದು ಸರ್ಕಾರದ ಜವಾಬ್ದಾರಿ ಹಾಗೂ ಕರ್ತವ್ಯ ಎಂದರು.

ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು
ಚಲನಶೀಲತೆ ಇಲ್ಲದ ಸಮಾಜದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅದಕ್ಕಾಗಿಯೇ ಸಂವಿಧಾನದ ಪೀಠಿಕೆವನ್ನು ಓದಿ ಅರ್ಥಮಾಡಿಕೊಂಡು ಅದರಂತೆ ನಡೆಯಬೇಕು. ಸಂವಿಧಾನದ ವಿರೋಧಿಗಳು ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ. ಸಂವಿಧಾನದ ಆಶಯಗಳನ್ನು ಈಡೇರಿಸಬೇಕು. ಇದಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ನಾಲ್ಕು ಶಿಲ್ಪಿಗಳಿಗೆ ಜಕಣಾಚಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಾಸನದ ಅರೆಮಾದನಹಳ್ಳಿಯ ವಿಶ್ವಕರ್ಮ ಜಗದ್ಗುರು ಪೀಠಾಧಿಪತಿ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಇಲಾಖೆ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಸೇರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Gokak Jyotishi add 8-2
Bottom Add3
Bottom Ad 2

You cannot copy content of this page