Belagavi NewsBelgaum NewsPolitics

*ಸಿಎಂ ಸಿದ್ದರಾಮಯ್ಯ ಬೆಳಗಾವಿ ಭೇಟಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಳಗಾವಿ ಜಿಲ್ಲಾ ಪ್ರವಸಕ್ಕೆ ದಿನಾಂಕ ನಿಗದಿಯಾಗಿದೆ.

ಸಿಎಂ ಸಿದ್ದರಾಮಯ್ಯ ಏಪ್ರಿಲ್ 12 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಅಂದು ಸಂಜೆ 6 ಗಂಟೆಗೆ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿರುವ ಶಾಸಕ ಆಸೀಫ್ ಸೇಠ್ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಅದೇ ದಿನ ರಾತ್ರಿ 9 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.


Home add -Advt

Related Articles

Back to top button