Kannada NewsKarnataka NewsLatestPolitics

*ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಜನರು ಸಾವು: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Home add -Advt

ಕಾಂಪೌಂಡ್ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ, ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಭೇಟಿಯಾಗಿ ಅವರ ಆರೋಗ್ಯ ಸ್ಥಿತಿ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂಪೌಂಡ್ ಕುಸಿತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. 7 ಜನರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದೇನೆ ಎಂದರು.

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಬೋರಿಂಗ್ ಆಸ್ಪತ್ರೆ ಸಮೀಪ ಗೋಡೆ ಕುಸಿದು ಈ ದುರಂತ ಸಂಭವಿಸಿದೆ, ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಗೋಡೆ ಕುಸಿದ ವೇಳೆ ಅಲ್ಲಿ ಇದ್ದ ವ್ಯಾಪಾರಿಗಳು ಹಾಗೂ ಪಾದಚಾರಿಗಳು ಸಾವಿಗೀಡಾದವರಲ್ಲಿ ಸೇರಿದ್ದಾರೆ.

Related Articles

Back to top button