Kannada NewsKarnataka NewsLatestPolitics
*ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ; ಅಧ್ಯಕ್ಷ ಸೋಮನಾಥ್ ಗೆ ಪೇಟ ತೊಡಿಸಿ ಸನ್ಮಾನಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳ ಪರಿಶ್ರಮ ಕಂಡು ಇಡೀ ವಿಶ್ವವೇ ತಲೆಬಾಗಿದೆ. ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಇಸ್ರೋ ವಿಜ್ಞಾನಿಗಳನ್ನು, ಸಿಬ್ಬಂದಿಗಳನ್ನು ಅಭಿನಂದಿಸಿದರು. ಇದೇ ವೇಳೆ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಪೇಟ ತೊಡಿಸಿ, ಸನ್ಮಾನ ಮಾಡಿದರು.
ಈ ವೇಳೆ ಇಸ್ರೋ ವಿಜ್ಞಾನಿಗಳಿಗೆ, ಸಿಬ್ಬಂದಿಗಳಿಗೆ ಸಿಹಿ ವಿತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು.