ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೃತ ನೇಹಾಳ ತಂದೆ-ತಾಯಿಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ನೇಹಾ ತಂದೆನಿರಂಜನ ಹಿರೇಮಠ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ನೇಹಾ ತಂದೆ-ತಾಯಿಗಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಇದೇ ವೇಳೆ ನೇಹಾ ಹತ್ಯೆಯ ಆರೋಪಿ ಫಯಾಜ್ ಗೆ ಕಠಿಣ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದರು. ಸಿಎಂ ಸಿದ್ದರಾಮಯ್ಯ ಜೊತೆ ಸಚಿವ ಸಂತೋಷ್ ಲಾಡ್ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ