Karnataka NewsPolitics

*ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: ಪತ್ನಿ ವಿರುದ್ಧ ದಾಖಲಾಯ್ತು ದೂರು*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಮೂಡಾ ನಿವೇಶನ ಕುರಿತ ಬಿಡುಗಡೆಯಾಗಿದ್ದ ದಾಖಲೆಯಲ್ಲಿನ ಸಹಿ ಬದಲಾವಣೆ ವಿಚರಕ್ಕೆ ಸಂಬಂಧಿಸಿದಂತೆ ನಕಲಿ ಸಹಿ ಎಂದು ಆರೋಪಿಸಿ ಸಿಎಂ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ.

ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಪಾರ್ವತಿ ವಿರುದ್ಧ ದೂರು ದಾಖಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿಡಿಯೋ ಮೂಲಕ ಬಿಡುಗಡೆ ಮಾಡಿದ್ದ ವೈಟ್ನರ್ ಹಿಂದಿನ ಅಕ್ಷರ ದಾಖಲೆಯಲ್ಲಿ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ಅಕ್ಷರಗಳ ಮೇಲೆ ವೈಟ್ನರ್ ಹಾಕಲಾಗಿತ್ತು. ಈಗ ಆ ಮೂಲ ಪತ್ರ ತೋರಿಸಿರುವ ಬಗ್ಗೆ ದೂರು ದಾಖಲಾಗಿದೆ. ಪತ್ರದಲ್ಲಿ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿರುವ ಸಹಿ ಬೇರೆ ಬೇರೆ ರೀತಿ ಇದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.


Related Articles

Back to top button