ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
25 ವರ್ಷದ ರಾಮಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ. ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನು ಬರೆದಿಟ್ಟಿದ್ದ ಡೆತ್ ನೋಟ್ ಲಭ್ಯವಾಗಿದ್ದು, ಅದರಲ್ಲಿ ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಹಾಗೂ ನಟ ಯಶ್ ಅವರು ಬರಬೇಕು ಎಂದು ಬರೆದಿದ್ದಾನೆ. ಅಲ್ಲದೇ ತಾನು ತಾಯಿಗೆ ತಕ್ಕ ಮಗನಾಗಲಿಲ್ಲ, ಅಣ್ಣನಿಗೆ ತಕ್ಕ ತಮ್ಮನಾಗಲಿಲ್ಲ, ಹುಡುಗಿಗೆ ತಕ್ಕ ಹುಡುಗನಾಗಲಿಲ್ಲ, ಸ್ನೇಹಿತರಿಗೂ ಒಳ್ಳೆ ಸ್ನೇಹಿತನಾಗಲಿಲ್ಲ ಎಲ್ಲರೂ ನನ್ನನ್ನು ಕ್ಷಮಿಸಿಬಿಡಿ ಎಂದು ಬರೆದಿದ್ದಾನೆ.
ಇದೀಗ ಅಭಿಮಾನಿ ಕೊನೆ ಆಸೆ ಈಡೇರಿಸಲು ಮುಂದಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಮಕೃಷ್ಣನ ಅಂಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ