Beereshwara 27
Emergency Service

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು; ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮಾತಿಗೆ ರಾಜ್ಯದ ಜನರು ಬೆಲೆ ಕೊಡಲ್ಲ. ಸಿದ್ದರಾಮಯ್ಯನವರ ಬೋಗಸ್ ಕಾರ್ಡ್ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಜನರು ಕಾಂಗ್ರೆಸ್ ಸುಳ್ಳು ಭರವಸೆಗೆ ಮರುಳಾಗಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ವಿಸಿಟಿಂಗ್ ಕಾರ್ಡ್. ಅವರ ಯಾವ ಯೋಜನೆಗಳು ಜಾರಿಗೆ ಬರಲ್ಲ ಎಂದು ಹೇಳಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಅಂದರೆ ಇದ್ದಿಲು ಮಸಿಗೆ ಬುದ್ಧಿ ಹೇಳಿದಂತೆ ಎಂದು ಟೀಕಿಸಿದರು.

ವಿಪಕ್ಷಗಳ 59 ಕೇಸ್ ಗಳ ಪೈಕಿ ಕೆಲವನ್ನು ಲೋಕಾಯುಕ್ತಕ್ಕೆ ಕೊಟ್ತಿದ್ದೇವೆ. ರೀಡೂ, ದುಬಾರಿ ವಾಚ್ ಬಗ್ಗೆ ನ್ಯಾಯಾಂಗ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು.

Bottom Ad 1
Bottom Ad 2

You cannot copy content of this page