ಪ್ರಗತಿವಾಹಿನಿ ಸುದ್ದಿ ಹಾಸನ: ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಬೇಕು. ನಾನು ಸಿಎಂ ಆಗಿದ್ದಾಗ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಕೇವಲ 5 ಕೆಜಿ ಅಕ್ಕಿಕೊಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡಲಿದೆ ಎಂದು ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿದರು.
ಹಾಸನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಉಚಿತ ಅಕ್ಕಿ ಕೊಡುತ್ತೇವೆ. ಕುಟುಂಬದ ಮಹಿಳೆಯರಿಗೆ 2000 ರೂಪಾಯಿ ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್ ವಿದ್ಯುತ್ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಕೊಟ್ಟ ಮಾತನ್ನು ನಾವು ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಘೋಷಿಸಿದರು.
ಇದೇ ವೇಳೆ ಕೋಲಾರದಲ್ಲಿ ಮನೆ ಹುಡುಕುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಕೋಲಾರದಲ್ಲಿ ನಾನು ಮನೆ ಹುಡುಕುತ್ತಿಲ್ಲ. ನಮ್ಮ ಪಕ್ಷದವರು ಮನೆ ಹುಡುಕುತ್ತಿದ್ದಾರೆ. ಮನೆ ಹುಡುಕುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ವಾಗ್ಮಿ, ಹಿರಿಯ ಶಿಕ್ಷಣ ತಜ್ಞ ಎಂ.ಕೆ. ಪಾಂಡುರಂಗ ಸೆಟ್ಟಿ ನಿಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ