ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಧಿಕಾರ ಹಂಚಿಕೆ ಸೂತ್ರದ ಮೂಲಕ ಕರ್ನಾಟಕ ನೂತನ ಮುಖ್ಯಮಂತ್ರಿ ಆಯ್ಕೆ ಹಗ್ಗಜಗ್ಗಾಟ ಬಗೆಹರಿಸಲಾಗಿರುವುದು ಬಹುತೆಕ ಖಚಿತವಾಗಿದ್ದು, ಇದರ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ನಾಯಕರು ಒಂದೇ ಕಾರಿನಲ್ಲಿ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನಿವಾಸದಲ್ಲಿ ಬೆಳಿಗ್ಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಬಳಿಕ ಒಂದೇ ಕಾರಿನಲ್ಲಿ ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಈ ವೇಳೆ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ನಾಯಕರ ಕೈ ಎತ್ತಿ ಹಿಡಿದು ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ