ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ಎದುರಾಗಿದೆ. ರಾಜ್ಯಪಾಲರ ಕ್ರಮದ ಬಗ್ಗೆ ಸಿಎಂ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ನನ್ನ ವಿರುದ್ಧ ದೊಡ್ಡ ಷಡ್ಯಂತ್ರವೇ ನಡೆದಿದೆ ಎಂದರು.
ದೂರು ಸಲ್ಲಿಸಿದ ದಿನವೇ ನನಗೆ ಶೋಕಾಸ್ ನೋಟಿಸ್ ಕೊಟ್ಟಿದ್ದರು. ಹಾಗಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಅನುಮಾನ ಇತ್ತು. ಇದನ್ನು ನಾವು ಮೊದಲೇ ನಿರೀಕ್ಷಿಸಿದ್ದೆವು. ಹೆಚ್.ಡಿ.ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ, ಮುರಿಗೇಶ್ ನಿರಾಣಿ ವಿರುದ್ಧದ ಕೇಸ್ ಗ್ಳಿಗೆ ಅನುಮತಿ ನೀಡದ ರಾಜ್ಯಪಾಲರು ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಬಿಜೆಪಿ ಕೈಗೊಂಬೆಯಾಗಿದ್ದಾರೆ. ರಾಜಭವನ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.
ನಾನು ರಾಜೀನಾಮೆ ಕೊಡುವ ಪ್ರಮೇಯ ಬರಲ್ಲ, ಹೈಕಮಾಂಡ್ ನಾಯಕರು, ಸಚಿವರು, ಶಾಸಕರು ನನ್ನ ಬೆಂಬಲಿಕ್ಕಿದ್ದಾರೆ. ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ