*ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ ವಿರುದ್ಧ ಬಿಜೆಪಿಯಿಂದ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬಿಜೆಪಿ ಎಂ ಎಲ್ ಸಿ ಛಲವಾದಿ ನಾರಾಯಣಸ್ವಾಮಿ ದೂರು ದಾಖಲಿಸಿದ್ದಾರೆ. ವರುಣಾ ಕ್ಷೇತ್ರದಲ್ಲಿ ನಿನ್ನೆ ಸಿದ್ದರಾಮಯ್ಯ ವಾಲಗ ಬಾರಿಸುವವರಿಗೆ ಹಣ ಹಂಚುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ರಣದೀಪ್ ಸುರ್ಜೇವಾಲಾ ಮುಖ್ಯಮಂತ್ರಿಗಳನ್ನು ಹಲವು ಬಾರಿ ಶಕುನಿ ಎಂದು ಕರೆದಿದ್ದಾರೆ. ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಸುರ್ಜೇವಾಲಾ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾಗಿ ತಿಳಿಸಿದ್ದಾರೆ.

https://pragati.taskdun.com/siddaramaiahd-k-shivakumarvarunavidhanasabha-election/


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button