Latest

*ಬಾದಾಮಿಯಲ್ಲಿ ನಾಳೆ ಸಿದ್ದರಾಮಯ್ಯ ಭರ್ಜರಿ ರೋಡ್ ಶೋ; ಕ್ಷೇತ್ರ ಗೊಂದಲದ ನಡುವೆ ಅಚ್ಚರಿ ನಡೆ*

ಪ್ರಗತಿವಾಹಿನಿ ಸುದ್ದಿ; ಬಾದಾಮಿ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳೆ ಬಾದಾಮಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನಾಳೆ ಬಾದಾಮಿ ಕ್ಷೇತ್ರದ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಬಳಿಕ ರೋಡ್ ಶೋ ನಡೆಸುತ್ತಿದ್ದಾರೆ. ರೋಡ್ ಶೋಗಾಗಿ ಭರ್ಜರಿ ತಯಾರಿ ನಡೆಸಲಾಗಿದೆ.

500 ಕೋಟಿ ವೆಚ್ಚದ ಬಾದಾಮಿ-ಕೆರೂರು ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಗೆ ಸಿದ್ದರಾಮಯ್ಯ ಚಾಲನೆ ನಿಡಲಿದ್ದಾರೆ. ಬಳಿಕ ರೋಡ್ ಶೋ ನಡೆಸಲಿದ್ದಾರೆ. ರಾಮದುರ್ಗದ ಕ್ರಾಸ್ ನಿಂದ ಎಪಿಎಂಸಿ ಆವರಣದವರೆಗೆ ರೋಡ್ ಶೋ ನಡೆಸಲಿದ್ದಾರೆ.

ಕೋಲಾರ, ವರುಣಾ ಎರಡು ಕ್ಷೇತ್ರಗಳ ಗೊಂದಲದ ನಡುವೆ ಹಾಲಿ ಕ್ಷೇತ್ರವಾಗಿರುವ ಬಾದಾಮಿಯಲ್ಲಿ ಸಿದ್ದರಾಮಯ್ಯ ನಾಳೆ ರೋಡ್ ಶೋ, ಜಿಲ್ಲಾ ಪ್ರವಾಸದಲ್ಲಿ ತೊಡಗುತ್ತಿರುವುದು ಅಚ್ಚರಿಗೆ ಕಾರಣವಗಿದೆ.

Home add -Advt

Related Articles

Back to top button