Kannada NewsKarnataka NewsLatestPolitics

*ಮಹಾರಾಷ್ಟ್ರಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ; ಕೊಲ್ಲಾಪುರದಲ್ಲಿ ಕಾಂಗ್ರೆಸ್ ನಾಯಕರಿಂದ ಅದ್ಧೂರಿ ಸ್ವಾಗತ*

ಪ್ರಗತಿವಾಹಿನಿ ಸುದ್ದಿ; ಸಾಂಗ್ಲಿ: ಸಿಎಂ ಸಿದ್ದರಾಮಯ್ಯ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದು, ಕೊಲ್ಲಾಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಾಯಕರು ಆತ್ಮೀಯವಾಗಿ ಸ್ವಾಗತಿಸಿದರು.

ಸಾಂಗ್ಲಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸಾಂಗ್ಲಿಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಲ್ಲಾಪುರ ವಿಮಾನ ನಿಲ್ದಾಣದಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಬಾಳಾ ಸಾಹೇಬ್ ತೋರತ್, ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.

Home add -Advt

ಬಳಿಕ ಸಿಎಂ ಸಿದ್ದರಾಮಯ್ಯ ರಸ್ತೆ ಮಾರ್ಗದ ಮೂಲಕವಾಗಿ ಕೊಲ್ಲಾಪುರದಿಂದ ಸಾಂಗ್ಲಿಗೆ ತೆರಳಿದ್ದಾರೆ.


Related Articles

Back to top button