Uncategorized

ಸಿದ್ದರಾಮನಹುಂಡಿ ಗಲಾಟೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸಿದ್ದರಾಮನಹುಂಡಿಯಲ್ಲಿ ನಡೆದ ಗಲಾಟೆ ರಾಜಕೀಯ ಕಾರಣಕ್ಕಾಗಿ ನಡೆದ ಗಲಾಟೆಯಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಿದ್ದರಾಮನಹುಂಡಿಯಲ್ಲಿ ಗುರುವಾರ ನಡೆದಿರುವ ಗಲಾಟೆ ಬೈಕ್ ಅಪಘಾತಕ್ಕೆ ಸಂಬಂಧಿಸಿದ್ದೇ ಹೊರತು ಚುನಾವಣಾ ಘರ್ಷಣೆಯಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರ ಹೊರತಾಗಿಯೂ ಇದಕ್ಕೆ ರಾಜಕೀಯ ಘರ್ಷಣೆಯ ಬಣ್ಣ ಬಳಿದು ಸುಳ್ಳು ಆರೋಪ ಮಾಡುತ್ತಿರುವ ಸಂಸದ ಪ್ರತಾಪ್ ಸಿಂಹ ಮತ್ತು ಇತರರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ನಿನ್ನೆ ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಗೆ ಬಿಜೆಪಿ ಅಭ್ಯರ್ಥಿ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಚುನಾವಣಾ ಪ್ರಚಾರಕ್ಕೆ ಬಂದು ತೆರಳಿದ ಬಳಿಕ ಗಲಾಟೆ ನಡೆದಿದೆ ಎನ್ನಲಾಗಿದ್ದು, ಓರ್ವ ಗಾಯಗೊಂಡಿದ್ದಾನೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಸಹೋದರ ಮಕ್ಕಳು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾಗಿ ಬಿಜೆಪಿ ನಾಯಕರು ಆರೊಪಿಸಿದ್ದರು.

https://pragati.taskdun.com/stone-pelting-on-former-deputy-chief-minister-g-parameshwar-severe-injury/

Home add -Advt

Related Articles

Back to top button