ಪ್ರಗತಿವಾಹಿನಿ ಸುದ್ದಿ; ವಿಜಯಪುರ: ನಡೆದಾಡುವ ದೇವರು, ಈ ಶತಮಾನದ ಅಪರೂಪದ ಸಂತ ಸಿದ್ದೇಶ್ವರ ಶ್ರೀಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.
ನಿನ್ನೆ ಅಸ್ತಂಗತರಾಗಿರುವ ಜ್ಞಾನಯೋಗಾಶ್ರಮದ 82 ವರ್ಷದ ಸಿದ್ದೇಶ್ವರ ಶ್ರೀಗಳ ಪರ್ಥಿವ ಶರೀರವನ್ನು ವಿಜಯಪುರ ಸೈನಿಕ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಪೊಲೀಸ್ ಬ್ಯಾಂಡ್, ರಾಷ್ಟ್ರಗೀತೆ ಮೂಲಕ 3 ಸುತ್ತು ಕುಶಾಲ ತೋಪು ಸಿಡಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಲಾಯಿತು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಮುರಿಗೇಶ್ ನಿರಾಣಿ, ಬಿ.ಶ್ರೀರಾಮುಲು, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುತ್ತೂರು ಶ್ರೀಗಳು, ನಿರ್ಮಲಾನಂದ ಸ್ವಾಮೀಜಿ, ಸಿರಿಗೆರೆಶ್ರೀ, ವಿಜಯಪುರ ಜಿಲ್ಲಾಧಿಕಾರಿ, ಎಸ್ ಪಿ ಸೇರಿದಂತೆ ಗಣ್ಯಾತಿಗಣ್ಯರು ಶ್ರೀಗಳ ಶ್ರೀಗಳ ಪಾರ್ಥಿವಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಶ್ರೀಗಳ ಅಂತಿಮ ದರ್ಶನ ಪಡೆಯಲು ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತಸಾಗರವೇ ಹರಿದುಬಂದಿದೆ. ಸರ್ಕಾರದಿಂದ ಗೌರವ ನಮನ ಸಲ್ಲಿಕೆ ಬಳಿಕವೂ ಭಕ್ತರಿಗಾಗಿ ಶ್ರೀಗಳ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
*ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿನಂದನಾ ಪತ್ರದಲ್ಲೇನಿದೆ?*
https://pragati.taskdun.com/siddeshwara-swamijilast-latterjnanayogashrama/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ