
ಸಹಕಾರ ಸಂಘದ ಬೆಳ್ಳಿಹಬ್ಬ ಮಹೋತ್ಸವದಲ್ಲಿ ಶ್ರೀಗಳು ಭಾಗಿ
ಪ್ರಗತಿವಾಹಿನಿ ಸುದ್ದಿ, ಪಾಲಬಾವಿ: ಹಂದಿಗುಂದ ಗ್ರಾಮದ ಶ್ರೀ ಮಹಾಲಕ್ಷ್ಮಿ ಕೋ-ಆಪ್ ಕ್ರೆಡಿಟ್ ಸೊಸೈಟಿ ಬೆಳ್ಳಿಹಬ್ಬದ ಸಮಾರಂಭಕ್ಕೆ ಶುಕ್ರವಾರ ಮುಂಜಾನೆ 10 ಗಂಟೆಗೆ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಆಗಮಿಸಲಿದ್ದಾರೆ.
ಬೆಳ್ಳಿಹಬ್ಬದ ಕಾರ್ಯಕ್ರಮವನ್ನು ಸಿದ್ದೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಲಿದ್ದು ಒಂದು ಗಂಟೆವರೆಗೆ ಭಕ್ತರನ್ನು ಉದ್ದೇಶಿಸಿ ಪ್ರವಚನ ಮಾಡುವರು. ಹಂದಿಗುಂದ – ಆಡಿ ವಿರಕ್ತಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಟಾಕಳಿಯ ಶ್ರೀ ಶಿವದೇವ ಸ್ವಾಮಿಗಳು ನೇತೃತ್ವ ವಹಿಸುವರು. ಕುಡಚಿ ಮತಕ್ಷೇತ್ರದ ಶಾಸಕರ ಹಾಗೂ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಪಿ. ರಾಜೀವ್ ಹಾಗೂ ಚಿಕ್ಕೋಡಿಯ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಂ.ಎಸ್.ಗೌಡಪ್ಪನವರ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಸಂಘದ ಸಂಸ್ಥಾಪಕ ಅಧ್ಯಕ್ಷ ರಾಮನಗೌಡ ಪಾಟೀಲ, ಸಂಘದ ಅಧ್ಯಕ್ಷರು ,ಸಹಕಾರ ಧುರೀಣರು ಬಣ್ಣಪ್ಪ ತೇಲಿ ಮತ್ತಿತರರು ಉಪಸ್ಥಿತರಿರುವರು ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಶಿವಾನಂದ ಖಾನಗೌಡರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಕುರಿತು ಜಿಲ್ಲಾಧಿಕಾರಿ ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ