Latest

*ಬೆಂಗಳೂರಿಗೆ ಆಗಮಿಸಿದ ನಿಯೋಜಿತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್; ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು, ನೂತನ ಶಾಸಕರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಜೊತೆಯಾಗಿ ಆಗಮಿಸಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಕಾಂಗ್ರೆಸ್ ನ ನೂತನ ಶಾಸಕರು ಹೂಗುಚ್ಛ ನೀಡಿ ಇಬ್ಬರು ನಾಯಕರನ್ನು ಬರಮಾಡಿಕೊಂಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಕಾರ ಕೂಗಿ ಸಂಭ್ರಮಿಸಿದ್ದಾರೆ. ಇನ್ನು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಮೊದಲಬಾರಿ ಡಿಸಿಎಂ ಆಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಇಬ್ಬರು ನಾಯಕರ ಕಾರಿನ ಮೇಲೆ ಪುಷ್ಪವೃಷ್ಟಿಗರೆದು ಸ್ವಾಗತಿಸಿದರು. ವಿವಿಧ ಕಲಾತಂಡಗಳು ಗೊಂಬೆ ಕುಣಿತ, ಕಂಸಾಳೆ, ಡೊಳ್ಳು ಕುಣಿತದ ಮೂಲಕ ಸ್ವಾಗತಿಸಿದ್ದು ವಿಶೇಷವಾಗಿತ್ತು. ಈ ವೇಳೆ ಇಬ್ಬರು ನಾಯಕರು ನೆರೆದಿದ್ದ ಕಾರ್ಯಕರ್ಯರು, ಜನರತ್ತ ಕೈಬೀಸಿ ಸಾಗಿದರು.

https://pragati.taskdun.com/dcm-d-k-shivakumarb-v-shrinivasyouth-congress-president/


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button