Kannada NewsKarnataka NewsLatestPolitics

*ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ಸಿಎಂ ಸುಚನೆಗಳ ಹೈಲೈಟ್ಸ್:

ಪ್ರತಿ ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ಸವಿವರವಾಗಿ ಮಾಡಬೇಕು. ಅದರಿಂದ ಜಿಲ್ಲೆಯ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗುತ್ತದೆ

ಆಯಾ ಜಿಲ್ಲೆಯ ರಸ್ತೆ ಸಾರಿಗೆ ನಿಗಮದ ಡಿಸಿ ಗಳೊಂದಿಗೆ ಸಭೆ ನಡೆಸಿ, ಬಸ್‌ ಗಳ ಕೊರತೆ, ಸ್ಥಗಿತಗೊಳಿಸಿರುವ ಮಾರ್ಗಗಳು, ಬಸ್‌ ಸೇವೆಯಲ್ಲಿನ ವ್ಯತ್ಯಯ ಮೊದಲಾದ ವಿಷಯಗಳ ಕುರಿತು ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಬೇಕು

ಮಾನವ-ವನ್ಯಪ್ರಾಣಿ ಸಂಘರ್ಷದ ಸಮಸ್ಯೆ ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು , ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮ್ಮ ಜಿಲ್ಲೆಯಲ್ಲಿ ವನ್ಯಪ್ರಾಣಿಗಳು ರೈತರ ಜಮೀನಿಗೆ, ತೋಟಕ್ಕೆ ನುಗ್ಗಲು ಆಹಾರ, ನೀರಿನ ಕೊರತೆಯೇ ಕಾರಣ. ಅರಣ್ಯದೊಳಗೆಯೇ ಆಹಾರ, ನೀರಿನ ವ್ಯವಸ್ಥೆ ಕಲ್ಪಿಸುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು

ಮೇವು ಸಾಲದೆ ಇದ್ದರೆ, ಬೆಳೆಯಬೇಕು. ರೈತರಿಂದ ಕೊಂಡುಕೊಳ್ಳಬೇಕು. ಮೇವಿಗೆ ಯಾವುದೇ ಕೊರತೆಯಾಗದಂತೆ ಎಚ್ಚರ ವಹಿಸಲು ಸೂಚಿಸಿದರು

20 ಕೋಟಿ ರೂ. ಮೇವು ಮಿನಿಕಿಟ್‌ ವಿತರಣೆ ಕುರಿತು ಸಂಚಿವ ಸಂಪುಟದ ಮುಂದೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು

ಮೇವಿನ ಲಭ್ಯತೆಯನ್ನು ವಾಸ್ತವಾಂಶವನ್ನು ಆಧರಿಸಿ ಲೆಕ್ಕಾಚಾರ ಹಾಕಬೇಕು

ಮೇವು ಸಾಲದೆ ಇದ್ದರೆ, ಬೆಳೆಯಬೇಕು. ರೈತರಿಂದ ಕೊಂಡುಕೊಳ್ಳಬೇಕು. ಮೇವಿಗೆ ಯಾವುದೇ ಕೊರತೆಯಾಗದಂತೆ ಎಚ್ಚರ ವಹಿಸಲು ಸೂಚಿಸಿದರು

ಮೇವಿನ ಲಭ್ಯತೆಯನ್ನು ವಾಸ್ತವಾಂಶವನ್ನು ಆಧರಿಸಿ ಲೆಕ್ಕಾಚಾರ ಹಾಕಬೇಕು

20 ಕೋಟಿ ರೂ. ಮೇವು ಮಿನಿಕಿಟ್‌ ವಿತರಣೆ ಕುರಿತು ಸಂಚಿವ ಸಂಪುಟದ ಮುಂದೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಮುಂದೆ ಮಾರ್ಚ್‌ , ಏಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿ ಸಮಸ್ಯೆ ಎದುರಾಗಬಹುದು. ಇದಕ್ಕೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು

ರೇಷ್ಮೆ, ತೋಟಗಾರಿಕೆ ಹಾಗೂ ಪಶುಸಂಗೋಪನಾ ಇಲಾಖೆಯ ಫಾರಂಗಳಲ್ಲಿ ಮೇವು ಬೆಳೆಯಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು

ಕುಡಿಯುವ ನೀರು, ಮೇವು, ಜನರು ಗುಳೆ ಹೋಗದಂತೆ ನೋಡಿಕೊಳ್ಳುವುದು ಹಾಗೂ ಇನ್‌ಪುಟ್‌ ಸಬ್ಸಿಡಿ ವಿತರಣೆ – ಈ ನಾಲ್ಕು ಅಂಶಗಳಿಗೆ ಹೆಚ್ಚಿನ ಒತ್ತು ನೀಡಬೇಕು

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಡೈರಿ ನಿರ್ವಹಣೆ ಮಾಡಬೇಕು ಎಂದು ತಿಳೀಸಿದರು

ತಿಂಗಳಿಗೆ ಕನಿಷ್ಠ ಎರಡು ಬಾರಿಯಾದರೂ ತಮ್ಮ ತಮ್ಮ ಉಸ್ತುವಾರಿಯ ಜಿಲ್ಲೆಗಳಿಗೆ ಭೇಟಿ ನೀಡುವುದು ಕಡ್ಡಾಯ ಮಾಡಿಕೊಳ್ಳಿ

ಮುಂದಿನ ತಿಂಗಳುಗಳಲ್ಲಿ ಬರಗಾಲ ತೀವ್ರವಾಗುವ ಸಾಧ್ಯತೆ ಇದೆ. ಆಗ ಬರಗಾಲದ ಸಮಸ್ಯೆ ಜನರಿಗೆ ತಟ್ಟದಂತೆ ನೋಡಿಕೊಳ್ಳಬೇಕು ಎಂದು ಪುನರುಚ್ಚರಿಸಿದರು

ಕುಡಿಯುವ ನೀರು, ಉದ್ಯೋಗ, ಮೇವು ಲಭ್ಯತೆ ಖಾತರಿಪಡಿಸಿ. ಒಂದು ವಾರದೊಳಗೆ ಇನ್‌ಪುಟ್‌ ಸಬ್ಸಿಡಿ ಪಾವತಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು

ಫೆಬ್ರುವರಿ 8 ರಂದು ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ಇಲ್ಲವಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು

ಇಲಾಖಾವಾರು ಮಳಿಗೆಗಳನ್ನು ಸ್ಥಾಪಿಸಲಾಗುವುದು. ಆಯಾ ಇಲಾಖೆಯ ಕಾರ್ಯದರ್ಶಿಗಳು ಮುಂಚಿತವಾಗಿಯೇ ಆಗಮಿಸಿ, ಅರ್ಜಿಗಳ ಪರಿಶೀಲನೆ ನಡೆಸಿ, ಪರಿಹಾರ ಕ್ರಮಗಳ ಕುರಿತು ಚರ್ಚಿಸಿ ಸಿದ್ಧತೆ ನಡೆಸಬೇಕು

ಮುಖ್ಯಮಂತ್ರಿಗಳು ಆಯಾ ಇಲಾಖೆಯ ಮಳಿಗೆಗೆ ಭೇಟಿ ನೀಡಿದಾಗ ಈ ಅರ್ಜಿಗಳನ್ನು ಮುಖ್ಯಮಂತ್ರಿಗಳ ಅವಗಾಹನೆಗೆ ತಂದು, ಕ್ರಮ ವಹಿಸಬೇಕು

ಅಧಿವೇಶನದಲ್ಲಿ ಬರುವ ಪ್ರಶ್ನೆಗಳಿಗೆ ಉತ್ತರ ಒದಗಿಸಲೇ ಬೇಕು. ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಸಮಯ ತೆಗೆದುಕೊಳ್ಳಬೇಕು. ಅನಗತ್ಯವಾಗಿ ಉತ್ತರ ನೀಡದಿರುವುದು, ಸಮಯ ತೆಗೆದುಕೊಳ್ಳುವುದು ಮಾಡಬಾರದು

ಅಧಿವೇಶನದ ಸಂದರ್ಭದಲ್ಲಿ ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಬೇಕು

ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿದರೆ ಸರ್ಕಾರ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು .

Related Articles

Back to top button