Latest

ಸಿದ್ಧಾರ್ಥ್ ಹೆಗ್ಡೆ ಪುತ್ರನ ಜತೆ ಡಿ.ಕೆ ಶಿವಕುಮಾರ್ ಪುತ್ರಿ ವಿವಾಹ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಡೆ ಅವರ ಪುತ್ರ ಅಮಾರ್ತ್ಯ ಹೆಗ್ಡೆ ಅವರೊಂದಿಗೆ ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಅವರ ವಿವಾಹ ಮಾಡಲು ಇಬ್ಬರು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಅಮೆರಿಕದಲ್ಲಿ ಶಿಕ್ಷಣ ಪಡೆದಿರುವ ಅಮಾತ್ರ್ಯ ಅವರು ಸದ್ಯ ತಾಯಿ ಮಾಳವಿಕಾ ಅವರೊಂದಿಗೆ ಕಂಪನಿಯ ವ್ಯವಹಾರ ನಿರ್ವಹಿಸುತ್ತಿದ್ದಾರೆ. ಎಂಜಿನಿಯರಿಂಗ್‌ ಪದವೀಧರೆಯಾದ ಐಶ್ವರ್ಯ ಅವರು ತಂದೆ ಡಿ.ಕೆ.ಶಿವಕುಮಾರ್‌ ಸ್ಥಾಪಿಸಿರುವ ಗ್ಲೋಬಲ್‌ ಅಕಾಡೆಮಿ ಆಫ್‌ ಟೆಕ್ನಾಲಜಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

Home add -Advt

ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮದುವೆ ಮಾತುಕತೆ ಅಂತಿಮ ಹಂತಕ್ಕೆ ತಲುಪಿದ್ದು, ಈ ವರ್ಷಾಂತ್ಯದೊಳಗೆ ವಿವಾಹ ಕಾರ್ಯ ನೆರವೇರಲಿದೆ.

ಎಸ್‌ ಎಂ ಕೃಷ್ಣ ಅವರ ಜತೆಗೆ ಮಾತ್ರವಲ್ಲದೆ, ಅವರ ಅಳಿಯ ಸಿದ್ದಾರ್ಥ ಹಾಗೂ ಡಿ.ಕೆ.ಶಿವಕುಮಾರ್‌ ಮಧ್ಯೆ ಸುದೀರ್ಘ ಸ್ನೇಹ-ಸಂಬಂಧವಿತ್ತು. ಕೆಫೆ ಕಾಫಿ ಡೇ ಮುಖ್ಯಸ್ಥ ಸಿದ್ಧಾರ್ಥ ಹೆಗ್ಡೆ ಅವರು ಕಳೆದ ವರ್ಷದ ಜುಲೈನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಿದ್ಧಾರ್ಥ್ ಸಾವಿಗೂ ಮುನ್ನವೇ ಎರಡೂ ಕುಟುಂಬಗಳ ಮಧ್ಯೆ ಮಕ್ಕಳ ವಿವಾಹ ಸಂಬಂಧದ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಎರಡೂ ಕುಟುಂಬಗಳು ಕಳೆದ ಭಾನುವಾರ ಡಿ.ಕೆ.ಶಿವಕುಮಾರ್‌ ನಿವಾಸದಲ್ಲಿ ಒಟ್ಟಿಗೆ ಸೇರಿ ಎಸ್‌.ಎಂ.ಕೃಷ್ಣ ಅವರ ಉಪಸ್ಥಿತಿಯಲ್ಲಿ ಮದುವೆ ಮಾತುಕತೆ ಪೂರ್ಣಗೊಳಿಸಿವೆ ಎಂದು ಮೂಲಗಳು ತಿಳಿಸಿವೆ.

Related Articles

Back to top button