ಬಿಜೆಪಿ- ಜೆಡಿಎಸ್ ಅಪವಿತ್ರ ಮೈತ್ರಿ:ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ; ಚಿತ್ರದರ್ಗ: ಬಿಜೆಪಿ- ಜೆಡಿಎಸ್ ಯದ್ದು ಅಪವಿತ್ರ ಮೈತ್ರಿ. ಜನತಾ ದಳ (ಜಾತ್ಯಾತೀತ) ಕೋಮುವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದರು.
ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈತ್ರಿ ಬಗ್ಗೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗೆ ಬರು ವ ಬಗ್ಗೆ ಮುಖ್ಯಮಂತ್ರಿಗಳು, ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಮದ್ಯದಂಗಡಿ ತೆರೆಯುವುದಿಲ್ಲ:
ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ ಚಿಂತನೆ ನಡೆಸುತ್ತಿರುವುದಾಗಿ ಸಚಿವರು ಹೇಳಿಕೆ ನೀಡಿದ್ದಾರೆ, ಆದರೆ ನಾವು ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ:
ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಹಾಳು ಮಾಡಿದವರೇ ಬಿಜೆಪಿಯವರು. ಅವರಿಗೆ ಯಾವ ನೈತಿಕತೆ ಇದೆ. ನಮ್ಮ ಕಾಲದಲ್ಲಿ ಯಾವತ್ತೂ ಇಷ್ಟೊಂದು ಸಾಲ ಮಾಡಿರಲಿಲ್ಲ. ಹಾಗೂ ಈ ಮೊತ್ತದ ಬದ್ಧತೆ ವೆಚ್ಚ ಇರಲಿಲ್ಲ. ಎಲ್ಲಾ ಹಾಳು ಮಾಡಿ ಈಗ ಹೇಳುತ್ತಾರೆ ಎಂದರು, ಕಾಂಗ್ರೆಸ್ ಪಕ್ಷದ ಶಾಸಕರೇ ಈ ಆರೋಪ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹೆಚ್ಚುವರಿ ಅನುದಾನ ದೊರೆಯುತ್ತಿಲ್ಲ ಎಂದು ಹೇಳಿದ್ದಾರೆ. ನಿಯಮಿತ ಅನುದಾನ ದೊರೆಯುತ್ತಿದೆ ಎಂದರು. ಭದ್ರಾ ಯೋಜನೆಗೆ 200 ಕೋಟಿ ರೂ.ಗಳನ್ನು ಭೂ ಸ್ವಾಧೀನಕ್ಕೆ ನೀಡಲಾಗಿದೆ. ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ ಹಾಗೂ ಗ್ಯಾರಂಟಿ ಯೋಜನೆಗಳಿಗೂ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಪಡಿಸಿದರು.
ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ?
ಬಿಜೆಪಿ ಸತ್ಯ ಶೋಧನಾ ಸಮಿತಿ ಶಿವಮೊಗ್ಗಕ್ಕೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸತ್ಯ ಶೋಧನೆ ಮಾಡಲು ಏನಾಗಿದೆ ಎಂದು ಪ್ರಶ್ನಿಸಿದರು. ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? ಈದ್-ಮಿಲಾದ್ ಸಂದರ್ಭದಲ್ಲಿ ಮುಸ್ಲಿಮರು ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ, ಯಾರು ಕಲ್ಲು ಎಸೆದಿದ್ದಾರೋ ಅವರ ಮೇಲೆ ಕ್ರಮ ಜರುಗಿಸಲಾಗಿದೆ. ಅವರು ಯಾವ ಪಕ್ಷದವರೇ ಆಗಿದ್ದರೂ, ಯಾರೇ ಆಗಿದ್ದರೂ ಅವರನ್ನು ಬಿಡಬೇಡಿ, ಕಾನೂನು ಕೈಗೆತ್ತಿಕೊಳ್ಳಲು ಬಿಡಬೇಡಿ ಎಂದು ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ