Latest

*ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಸಜ್ಜಾಗಿರುವ ರಾಜ್ಯ ಬಿಜೆಪಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಪೈಪೋಟಿ ತಾರಕಕ್ಕೇರಿದೆ.

ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಬಿಜೆಪಿ ನಾಯಕರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ಖಡ್ಗ ಹಿಡಿದುಕೊಂಡು ಡ್ರೆಸ್ ಹಾಕಿದ್ದವರು ಯಾರು? ನನ್ನ ತೇಜೋವಧೆ ಮಾಡಲು ಹೀಗೆಲ್ಲಾ ಮಾಡುತ್ತಿದ್ದಾರೆ. ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಸಿದ್ದು ನಿಜ ಕನಸುಗಳು ಪುಸ್ತಕ ಬಿಡಿಗಡೆ ಕಾರ್ಯಕ್ರಮ ರದ್ದು ಮಾಡುವಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ನಡುವೆ ಪುಸ್ತಕ ಬಿಡುಗಡೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಟೌನ್ ಹಾಲ್ ಮುಂಭಾಗದಲ್ಲಿ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಮತ್ತೊಂದೆಡೆ ಸಿದ್ದರಾಮಯ್ಯ ಆಪ್ತ ಬಳಗ ಸಿದ್ದರಾಮಯ್ಯನವರ ಪುಸ್ತಕ ಬಿಡುಗಡೆಗೆ ಸಜ್ಜಾಗಿದ್ದು, ಸಿದ್ದು ನಿಜ ಕನಸು ಎಂಬ ಪುಸ್ತಕ ಬಿಡುಗಡೆ ಮಾಡಲು ಮುಂದಾಗಿದೆ. ಸದ್ಯ ಪೋಸ್ಟರ್ ನಲ್ಲಿ ಪುಸ್ತಕದ ಸಾರಾಂಶ ಪ್ರಕಟಿಸಿದ್ದು, ಸಿದ್ದರಾಮಯ್ಯ ಅವಧಿಯ ಕಾರ್ಯಕ್ರಮಗಳ ವಿವಿರಗಳುಳ್ಳ ಪುಸ್ತಕ ಇದಾಗಿದೆ. ಈಗಾಗಲೆ ಪುಸ್ತಕ ರಚನೆ ಕಾರ್ಯಗಳು ಆರಂಭವಾಗಿವೆ ಎಂದು ತಿಳಿದುಬಂದಿದೆ.

*’ಸಿದ್ದು ನಿಜ ಕನಸುಗಳು’ ವಿರುದ್ಧ ಕಾಂಗ್ರೆಸ್ ದೂರು ದಾಖಲು*

https://pragati.taskdun.com/siddu-nijakanasugalubookcongresscomplaint/

Related Articles

Back to top button