Latest

*ನಮ್ಮ ನಾಯಕರಿಗೆ ಕಳಂಕ ತರಲು ಹೊರಟಿದ್ದಾರೆ: ಡಿ.ಕೆ.ಶಿವಕುಮಾರ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ;  ಬೆಂಗಳೂರು: ಬಿಜೆಪಿಯಿಂದ ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪುಸ್ತಕ ಬರೆದು ಚರ್ಚೆಗೆ ಕರೆಯಲಿ. ಚರ್ಚೆಗೆ ನಾವ್ ಸಿದ್ಧ. ಏನ್ ಟಿಪ್ಪು ಕನಸು? ಇತಿಹಾಸ ನಾವ್ ಬರೆದಿದ್ದಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನು 300ಕ್ಕೂ ಹೆಚ್ಚು ದೇವಸ್ಥಾನ ಕಟ್ಟಿಸಿದ್ದೇನೆ. ಆದರೆ ಒಂದು ಚರ್ಚ್ ಬಗ್ಗೆ ಬಿಜೆಪಿಯವರು ಪದೇ ಪದೇ ಮಾತಾಡ್ತಾರೆ. ಈಗ ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಬಿಡುಗಡೆ ಮೂಲಕ ನಮ್ಮ ನಾಯಕರಿಗೆ ಕಳಂಕ ತರಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Home add -Advt

ಅವರು ಪುಸ್ತಕ ಬರೆದು ಚರ್ಚೆಗೆ ಕರೆಯಲಿ. ನಾವು ಚರ್ಚೆಗೆ ಸಿದ್ಧರಿದ್ದೇವೆ. ನಾವು ಎಲ್ಲಾ ವಿಚಾರ ಚರ್ಚೆ ಮಾಡಲು ಸಿದ್ಧರಿದ್ದೇವೆ ಎಂದು ಗುಡುಗಿದರು. ಬಿಜೆಪಿ ನಾಯಕರಿಗೆ ಜನರ ಬದುಕು ಕಟ್ಟಿಕೊಡಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ಬಗ್ಗೆ ಚರ್ಚಿಸಲು ಆಗುತ್ತಿಲ್ಲ. ಎಲವನ್ನೂ ಬಿಟ್ಟು ಜನರ ಭವನೆಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ದ್ವೇಷದ ಭಾವನೆಗಳನ್ನು ಬಿತ್ತುತ್ತಿದ್ದಾರೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಲಿ. ಚರ್ಚೆಗೆ ನಾವು ಸಿದ್ಧರಿದ್ದೇವೆ ಎಂದು ಹೇಳಿದರು.

*ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ*

https://pragati.taskdun.com/siddu-nija-kanasugalubook-releasebjpdefamation-casesiddaramaiah/

Related Articles

Back to top button